ಚಿಕ್ಕಮಗಳೂರು

ಶೃಂಗೇರಿಯ ಕಟ್ಟಡವೊಂದರಲ್ಲಿ ಬೆಂಕಿ ಅನಾಹುತ

ಚಿಕ್ಕಮಗಳೂರು: ಶೃಂಗೇರಿಯ ಖಾಸಗಿ ಆಸ್ಪತ್ರೆಯೊಂದರ ಕ್ವಾಟ್ರಸ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕೂಟಿನಿಂದ ಗೃಹಬಳಕೆಯ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಧನ್ವಂತರಿ ಆಸ್ಪತ್ರೆಯ ಪಕ್ಕದಲ್ಲಿ ಕ್ವಾಟ್ರಸ್ ನಲ್ಲಿ ವಾಸವಿದ್ದ ಡಾ.ಪ್ರವೀಣ್ ಎಂಬವರ ಮನೆಯಲ್ಲಿ ಈ ಅನಾಹುತ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ಆರಿಸಿದ್ದಾರೆ. ಲಕ್ಷಾಂತರ ರೂಪಾಯಿ ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. 
ವಸತಿ ಗೃಹದ ಕಟ್ಟಡ ಹಳೇ ಕಾಲದ್ದಾಗಿದೆ. ಆಸ್ಪತ್ರೆ ಸಿಬ್ಬಂದಿಗಳು ಈಗಲೂ ಉಪಯೋಗಿಸುತ್ತಾ ಬಂದಿದ್ದಾರೆ. ಸೂಕ್ತ ವ್ಯವಸ್ಥೆಗೆ ದುರಸ್ತಿ ಕಾರ್ಯ ಅಗತ್ಯವಿದೆ ಎಂದು ಸ್ಥಳೀಯರು ಹೇಳಿದ್ದಾರೆ.
Spread the love

Related Articles

Leave a Reply

Your email address will not be published. Required fields are marked *

Back to top button