Breaking NewsLatestಮನರಂಜನೆಸೆಲೆಬ್ರಿಟಿ

ಅಶ್ಲೀಲ ಚಿತ್ರ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರಗಳನ್ನು ಮಾಡಿ ಆ್ಯಪ್ ಗಳಲ್ಲಿ ಅಪಲೋಡ್ ಮಾಡುತ್ತಿದ್ದ ಪ್ರಕರಣದಲ್ಲಿ ಸೋಮವಾರ ರಾತ್ರಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿ 2021ರಲ್ಲಿ ಅಶ್ಲೀಲ ಚಿತ್ರಗಳನ್ನು ಮಾಡಿ ಕೆಲ ಆ್ಯಪ್ ಗಳಲ್ಲಿ ಅಪ್ ಲೋಡ್ ಮಾಡುತ್ತಿರುವ ಬಗ್ಗೆ ಮುಂಬೈ ಕ್ರೈಂ ಬ್ರ್ಯಾಂಚ್ ನಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ರುವಾರಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರು ಎಂಬುದಾಗಿ ತಿಳಿದುಬಂದ ಹಿನ್ನಲೆಯಲ್ಲಿ ಪೊಲೀಸರು ಜುಲೈ 19ರಂದು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಅಲ್ಲದೇ ಈ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ದೊರೆತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಾಜ್ ಕುಂದ್ರಾ ಬಂಧನದ ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರು ಸೋಮವಾರ ಮುಂಬೈ ಕ್ರೈಂ ಬ್ರ್ಯಾಂಚ್ ನಲ್ಲಿ ರಾತ್ರಿ ಕಳೆದಿದ್ದು, ಮಂಗಳವಾರ(ಜುಲೈ 20)ದಂದು ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂಬುದಾಗಿ ತಿಳಿದುಬಂದಿದೆ.

Spread the love

Related Articles

Leave a Reply

Your email address will not be published. Required fields are marked *

Back to top button