Breaking NewsLatestಜಿಲ್ಲಾ ಸುದ್ದಿ

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹೆಚ್ಚಾದ ಮಳೆ: ಪ್ರವಾಹದ ಭೀತಿಯಲ್ಲಿ ಬೆಳಗಾವಿ

ಬೆಳಗಾವಿ : ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಕೃಷ್ಣಾ, ದೂದಗಂಗಾ, ವೇದಗಂಗಾ ನದಿಯ ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಪ್ರವಾಹದ ಆತಂಕ ಎದುರಾಗಿದೆ.

ಏಕಾಏಕಿ ಕೃಷ್ಣಾ ನದಿ ನೀರಿನ ಒಳ ಹರಿವಿನಲ್ಲಿ ಏರಿಕೆಯಾಗಿದ್ದ, ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಆರಂಭವಾಗಿದೆ.ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೆಳ ಹಂತದ ಚಿಕ್ಕೋಡಿ ತಾಲೂಕಿನ ಯಡೂರು – ಕಲ್ಲೋಳ ಸೇತುವೆ ಮುಳುಗಡೆ ಯಥಾಸ್ಥಿತಿ ಮುಂದುವರೆದಿದೆ. ಚಿಕ್ಕೋಡಿ ಭಾಗದಲ್ಲಿ 10 ಎಂಎಂ ನಷ್ಟು ಮಳೆಯ ಪ್ರಮಾಣ ದಾಖಲಾಗಿದೆ. ಸದ್ಯ ಯಾವುದೇ ಪ್ರವಾಹದ ಆತಂಕ ಇಲ್ಲ ಎಂದು ಬೆಳಗಾವಿ ಜಿಲ್ಲಾಡಳಿತದ ಸ್ಪಷ್ಟನೆ ನೀಡಿದೆ.

ಇನ್ನು ಎರಡು ದಿನ ಕೂಡ ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯಲ್ಲಿದ್ದು ಕೃಷ್ಣಾ ನದಿಯಿಂದ ಹೆಚ್ಚು ನೀರು ಬರುವ ನಿರೀಕ್ಷೆ ಕೂಡ, ಇನ್ನು ನದಿ ತೀರದ ಗ್ರಾಮಗಳಲ್ಲಿ ತಾಲ್ಲೂಕ ಆಡಳಿತಕ್ಕೆ ಸೂಕ್ತ ಮುಂಜಾಗ್ರತಾ ಕ್ರಮ ಸೂಚಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button