ರಾಮನಗರ
ಸಿ ಪಿ ಯೋಗೇಶ್ವರ್ ವಿರುದ್ಧ ಎಚ್ಡಿಕೆ ವಾಗ್ದಾಳಿ

ರಾಮನಗರ: ಪರಿಜ್ಞಾನವಿಲ್ಲ ವ್ಯಕ್ತಿಯ ಬಗ್ಗೆ ನಾನು ಮಾತನಾಡುವುದಿಲ್ಲವೆಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ಬರ್ ವಿರುದ್ಧ ವಾಗ್ಧಾಳಿ ನಡೆಸಿದರು.
ಕನ್ನಡ ಕೂಟ ನ್ಯೂಯಾರ್ಕ್ ಮತ್ತು ಅಮ್ಮಾ ಫೌಂಡೇಶನ್ ಸಹಯೋಗದೊಂದಿಗೆ ಸುಮಾರು ರಾಮನಗರ ಜಿಲ್ಲೆಗೆ ೪೩ ಲಕ್ಷ ರೂ.ವೆಚ್ಚದ ಅಗತ್ಯ ವೈದ್ಯಕೀಯ ಉಪಕರಣ ವಿತರಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಆ ವ್ಯಕ್ತಿಗೆ ಏನು ಮಾತನಾಡಬೇಕು ಎನ್ನುವ ಪರಿಜ್ಞಾನ ಇಲ್ಲ. ಅಂತಹವರ ಬಗ್ಗೆ ನಾನೇನು ಮಾತನಾಡಲಿ.
ನಾನು ಮಂಡ್ಯ ಮೈಶುಗರ್ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದೆ. ಖಾಸಗಿಯವರಿಗೆ ಕೊಡಬೇಡಿ ಎಂದು ಮನವಿ ಮಾಡಲು ಹೋಗಿದ್ದೆ ನಾನೇನು ನನ್ನ ಸ್ವಂತ ಕೆಲಸಕ್ಕೆ ಹೋಗಿದ್ನಾ ಎಂದು ಯೋಗೇಶ್ವರ್ ಆರೋಕ್ಕೆ ತಿರುಗೇಟು ನೀಡಿದ್ರು.
ಸರಕಾರದ ಮುಖ್ಯಮಂತ್ರಿ, ಮಂತ್ರಿಗಳು ಧರ್ಮಕ್ಕೆ ಕೆಲಸ ಮಾಡ್ತಾರಾ? ಸರ್ಕಾರದ ಕೆಲಸಕ್ಕಾಗಿ ಸಿಎಂ ಭೇಟಿ ಮಾಡಿದ್ದೇನೆ. ಸಾರ್ವಜನಿಕರ ಕೆಲಸ ಸರ್ಕಾರ ಆಗಬೇಕಲ್ಲವೇ ಎಂದು ಪ್ರಶ್ನಿಸಿದರು.




