Breaking NewsLatestಕಲಬುರ್ಗಿಜಿಲ್ಲಾ ಸುದ್ದಿರಾಜಕೀಯ

ಸಿಎಂ ಯಡಿಯೂರಪ್ಪ ನಮ್ಮ ನಾಯಕರು ಅವರೊಂದಿಗೆ ನಾವಿದ್ದೇವೆ: ಸಂಸದ ಉಮೇಶ್ ಜಾಧವ್

ಕಲಬುರ್ಗಿ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಅಧಿಕೃತವಾಗಿ ಇಲ್ಲಿವರೆಗೆ ಯಾವುದೇ ಸೂಚನೆ ಬಂದಿಲ್ಲ, ನಮಗೆ ಯಡಿಯೂರಪ್ಪ ನಾಯಕರು, ಅವರ ಜೊತೆ ನಾವಿರುತ್ತೇವೆ ಎಂದು ಸಂಸದ ಡಾ ಉಮೇಶ್ ಜಾಧವ್ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿ ಕಾಂಗ್ರೆಸ್ ಪಕ್ಷ ತೊರೆದು ನಾನು ಬಿಜೆಪಿ ಪಕ್ಷಕ್ಕೆ ಬಂದಿದ್ದೇನೆ. ನಮಗೆ ಬಿಎಸ್‌ವೈ ಜೊತೆಗೆ ಪಾರ್ಟಿನು ಅಷ್ಟೆಮುಖ್ಯ, ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ದನಾಗಿರುತ್ತೇನೆ ಎಂದರು.

ಇದೆವೇಳೆ ಮಾತನಾಡಿದ ಅವರು, ಸದ್ಯದ ರಾಜಕೀಯ ಬೆಳವಣಿಗೆಯಿಂದ ಬಿಎಸ್​ವೈ ನಮ್ಮನ್ನು ಕರೆಸಿ ಯಾರು ಆತಂಕಕ್ಕೆ ಒಳಗಾಗಬಾರದೆಂದು ಧೈರ್ಯ ಹೇಳಿದ್ದಾರೆ. ನಮ್ಮ ಪಕ್ಷ ಅತೀ ದೊಡ್ಡ ಪಕ್ಷ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಗಳನ್ನ ಎಲ್ಲರೂ ಪಾಲನೆ ಮಾಡಬೇಕಾಗುತ್ತೆ ಎಂದು ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button