Breaking NewsLatestಮೆಟ್ರೋರಾಜಕೀಯ
ನಾಳೆ ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಣೆ ಸಾಧ್ಯತೆ..?

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಳೆಯೇ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ ಸಾಧನ ಸಮಾವೇಶದ ನಂತರ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ ಎನ್ನಲಾಗುತ್ತಿದ್ದು ನಾಳೆ ಸಂಜೆಯ ಹೊತ್ತಿಗೆ ಯಡಿಯೂರಪ್ಪ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.
ನಾಳೆ ನಿಗಧಿಯಾಗಿರುವ ಸಾಧನಾ ಸಮಾವೇಶದ ನಂತರ ಮಧ್ಯಾಹ್ನದ ನಂತರದ ಎಲ್ಲ ಕಾರ್ಯಕ್ರಮಗಳು ರದ್ದಾಗಿರುವುದು ಕೂಡ ಈ ವದಂತಿಗೆ ಪುಷ್ಟಿ ನೀಡಿದೆ. ಕಾರ್ಗಿಲ್ ವಿಜಯ ದಿವಸ್ ಮತ್ತು ಯಡಿಯೂರಪ್ಪ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಸಂಬಂಧ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶ ಹೊರತು ಮಧ್ಯಾಹ್ನ ನಂತರದ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.
ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬಂದಿರುವುದು ಎಲ್ಲರಲ್ಲೂ ಕುತೂಹಲಕ್ಕೆ ಕಾರಣವಾಗಿದೆ.
