Breaking NewsLatestಜಿಲ್ಲಾ ಸುದ್ದಿಬಾಗಲಕೋಟೆ

ನಾಳೆಯಿಂದ ಎರಡು ದಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ

ಬಾಗಲಕೋಟೆ: ರಾಜ್ಯದಲ್ಲಿ ಪ್ರವಾಹ ಹಿನ್ನಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾಳೆಯಿಂದ ಬಾಗಲಕೋಟೆ, ಬೆಳಗಾವಿ ಎರಡು ದಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಸ್ವಕ್ಷೇತ್ರ ಬಾದಾಮಿ ತಾಲೂಕಿನಲ್ಲಿ ಮಲಪ್ರಭಾ ಪ್ರವಾಹಕ್ಕೆ ತುತ್ತಾದ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

ಗದಗ ಜಿಲ್ಲೆಯ ಕೊಣ್ಣೂರು ಬಳಿಕ ಬಾದಾಮಿ ತಾಲೂಕಿನ ಗೋವನಕೊಪ್ಪ, ಹೆಬ್ಬಳ್ಳಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಲಿದ್ದಾರೆ‌. ಸಂಜೆ 6ಗಂಟೆಗೆ ಬಾದಾಮಿಯ ಹೆಬ್ಬಳ್ಳಿ ಗ್ರಾಮದಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.

ನಾಡಿದ್ದು ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಖಾನಾಪುರ, ಸಂಕೇಶ್ವರ,ಯಮಕನಮರಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಎರಡು ದಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜುಲೈ 27 ರಂದು ರಾತ್ರಿ ಬೆಳಗಾವಿಯಿಂದ ವಿಮಾನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button