Breaking NewsLatestರಾಷ್ಟ್ರೀಯವಿದೇಶ
ವಿಜಯ್ ಮಲ್ಯ ದಿವಾಳಿ ಬ್ರಿಟನ್ ನ್ಯಾಯಾಲಯ ಘೋಷಣೆ

ಲಂಡನ್ : ಭಾರತದ ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ಲಂಡನ್ ಗೆ ಪಲಾಯನವಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ದಿವಾಳಿಯಾಗಿದ್ದಾರೆ ಎಂದು ಬ್ರಿಟನ್ನಿನ ನ್ಯಾಯಾಲಯವೊಂದು ಘೋಷಿಸಿದೆ.
ವಿಜಯ್ ಮಲ್ಯ ಅವರು ಬ್ರಿಟನ್ ನಲ್ಲಿದ್ದಾರೆ. ಮಲ್ಯ ಅವರು ಪಡೆದ ಸಾಲವನ್ನು ನಿಗದಿತ ಅವಧಿಯೊಳಗೆ ಹಿಂದಿರುಗಿಸುತ್ತಾರೆ ಎಂದು ಹೇಳಲು ಸಾಕಷ್ಟು ಆಧಾರಗಳಿಲ್ಲ ಎಂದು ನ್ಯಾಯಾಧೀಶರು ಆದೇಶದಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.
ಭಾರತೀಯ ಬ್ಯಾಂಕ್‍ಗಳ ಒಕ್ಕೂಟಕ್ಕೆ (ಎಸ್ ಬಿಐ) ಇದೀಗ ಸ್ಥಗಿತಗೊಂಡಿರುವ ವಿಜಯ್ ಮಲ್ಯ ಅವರ ಕಿಂಗ್‍ಫಿಶರ್ ಏರ್ ಲೈನ್ಸ್ ಗೆ ನೀಡಿದ ಸಾಲವನ್ನು ವಸೂಲಿ ಮಾಡಲು ಈ ತೀರ್ಪು ಸಹಾಯ ಮಾಡುತ್ತದೆ.
ಉದ್ಯಮಿ ಮಲ್ಯ ಅವರನ್ನು ‘ದಿವಾಳಿ’ ಎಂದು ಘೋಷಿಸಿದ ಆದೇಶವನ್ನು ಪ್ರಶ್ನಿಸಲು ಅವಕಾಶ ಕೊಡಬೇಕು ಎಂದು ಮಲ್ಯ ಅವರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದರೆ, ಮೇಲ್ಮನವಿಯು ಯಶಸ್ಸು ಕಾಣುವ ಸಾಧ್ಯತೆ ಇಲ್ಲ ಎಂದು ನ್ಯಾಯಾಧೀಶರು ಅರ್ಜಿಯನ್ನು ತಿರಸ್ಕರಿಸಿದ್ದಾರೆ, ಎನ್ನಲಾಗಿದೆ.
