ಉತ್ತರ ಕನ್ನಡ
ನಾಳೆ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಬೊಮ್ಮಾಯಿ; ಪ್ರವಾಹ ಪರಿಸ್ಥಿತಿ ವೀಕ್ಷಣೆ

ಕಾರವಾರ : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೊಮ್ಮಾಯಿಯವರು ತಮ್ಮ ಮೊದಲ ಭೇಟಿಯನ್ನು ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಮೀಸಲಿಟ್ಟಿದ್ದಾರೆ.
ಮುಖ್ಯಮಂತ್ರಿ ಕಾರ್ಯಾಲಯದ ಮಾಹಿತಿಯಂತೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸುವ ಬಸವರಾಜ್ ಬೊಮ್ಮಾಯಿ ಅವರು ರಸ್ತೆ ಮೂಲಕ ಯಲ್ಲಾಪುರಕ್ಕೆ ಬಂದು ನಂತರ ಯಲ್ಲಾಪುರ ಭಾಗದಲ್ಲಿ ಪ್ರವಾಹದಿಂದ ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿ ನಂತರ ಮಂಜಗುಣಿ ನಂತರ ಅಂಕೋಲಾಕ್ಕೆ ಭೇಟಿ ನೀಡಿ ಪ್ರವಾಹದಿಂದ ತೊಂದರೆಗೊಳಗಾದ ಪ್ರದೇಶವನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ನಾಳಿನ ಕಾರ್ಯಕ್ರಮದ ಕುರಿತು ಅಧಿಕೃತವಾಗಿ ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಜಿಲ್ಲಾಡಳಿತಕ್ಕೆ ಮಾಹಿತಿ ಬರಬೇಕಿದ್ದು, ಈಗಾಗಲೇ ಮೌಖಿಕವಾಗಿ ಮಾಹಿತಿ ನೀಡಲಾಗಿದೆ.




