ದಕ್ಷಿಣ ಕನ್ನಡ
ಕೆರೆಗಳ ಅಭಿವೃದ್ಧಿ ಕಾರ್ಯ ಚುರುಕು

ಮಂಗಳೂರು: ನಗರದ ಸುತ್ತಮುತ್ತಲಿನ ಕೆರೆಗಳನ್ನು ಅಭಿವೃದ್ಧಿಗೊಳಿಸಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ.
ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೆರೆಗಳ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಕೆರೆಗಳಿಗೆ ಚರಂಡಿ ನೀರು ಸೇರುವುದನ್ನು ತಡೆಯುವುದು, ರಕ್ಷಣಾ ಗೋಡೆ ನಿರ್ಮಿಸುವುದಕ್ಕೆ ಒತ್ತು ನೀಡಲಾಗುತ್ತಿದೆ. ಕೆರೆಗಳ ಅಭಿವೃದ್ಧಿಯಿಂದ ಅಂತರ್ಜಲ ವೃದ್ಧಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




