ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ
ಶಿವರಾಮ್ ಹೆಬ್ಬಾರ್ ಕಾರು ಅಪಘಾತ: ಸಿಎಂ ಭೇಟಿ ವೇಳೆ ಘಟನೆ…!

ಧಾರವಾಡ : ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ.
ಮುಖ್ಯಮಂತ್ರಿಗಳ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಆದರೆ, ಮಾಜಿ ಸಚಿವ ಶಿವರಾಮ್ ಹೆಬ್ಬಾರ್, ಸಿಎಂ ಕಾರಿನಲ್ಲಿದ್ದರು. ಅಲ್ಲದೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಆಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.




