Breaking NewsLatestರಾಜ್ಯಹುಬ್ಬಳ್ಳಿ - ಧಾರವಾಡ
ಶೆಟ್ಟರ್ ಜೊತೆ ಖುದ್ದು ಮಾತನಾಡುವೆ: ಬೊಮ್ಮಾಯಿ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಮತ್ತು ನಾನು ಆತ್ಮೀಯ ಸ್ನೇಹಿತರು. ಬೇರೆ ಪಕ್ಷದಲ್ಲಿ ಇದ್ದಾಗಲೂ ಉತ್ತಮ ಬಾಂಧವ್ಯ ಇತ್ತು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ, ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಸಂಪುಟ ಸೇರುವುದಿಲ್ಲ ಎಂಬ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಇನ್ನೂ ರಾಜಕೀಯಕ್ಕೆ ಬಂದಿರಲಿಲ್ಲ. ಆಗಿನಿಂದಲೂ ಒಳ್ಳೆಯ ಸ್ನೇಹಿತರಾಗಿದ್ದೇವೆ ಎಂದ ಅವರು, ಶೆಟ್ಟರ್ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಖುದ್ದು ಭೇಟಿಯಾಗಿ ಮಾತನಾಡುವೆ ಎಂದರು.
ಇದೇ ವೇಳೆ ಅವರು, ರಾಜ್ಯದ ಎರಡನೇ ಅತಿ ದೊಡ್ಡ ನಗರವಾಗಿರುವ ಹುಬ್ಬಳ್ಳಿಯನ್ನು ಉತ್ತುಂಗಕ್ಕೆ ಕೊಂಡೊಯ್ಯುವೆ ಎಂದು ಹೇಳಿದರು.
ಹುಬ್ಬಳ್ಳಿ ನನ್ನ ಪ್ರೀತಿಯ ಊರು ಎಂದ ಬೊಮ್ಮಾಯಿ, ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ ಎಂದರು.
