Breaking NewsLatestಜಿಲ್ಲಾ ಸುದ್ದಿರಾಜಕೀಯಹುಬ್ಬಳ್ಳಿ - ಧಾರವಾಡ

Madhu Bangarappa: ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪರ ಪುತ್ರ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆಯೇ ಜೆಡಿಎಸ್ ಬಿಡಲು ನಿರ್ಧರಿಸಿದ್ದ ಮಧು ಬಂಗಾರಪ್ಪ ಇಂದು ಅಧಿಕೃತವಾಗಿ ಕೈ ಹಿಡಿದಿದ್ದಾರೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಅವರು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಬಾವುಟವನ್ನು ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಲಾಯಿತು.

ಮಧು ಬಂಗಾರಪ್ಪ ಜೊತೆ ಹಲವು ಜೆಡಿಎಸ್ ನ ಮುಖಂಡರು ಕೈ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button