Breaking NewsLatestರಾಜಕೀಯರಾಜ್ಯರಾಷ್ಟ್ರೀಯ
ಪ್ರಧಾನಿ ಮೋದಿ ಭೇಟಿಯಾದ ಬೊಮ್ಮಾಯಿ

ನವದೆಹಲಿ: ನೂತನ ಸಿಎಂ ಆಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಶುಕ್ರವಾರ ಭೇಟಿಯಾದರು.
ಈ ಸಂದರ್ಭದಲ್ಲಿ ಬೊಮ್ಮಾಯಿ ಅವರಿಗೆ ಮೋದಿ ಶುಭ ಹಾರೈಸಿದರು. ಬೊಮ್ಮಾಯಿ ಜೊತೆಗಿನ ಭೇಟಿಯ ಬಗ್ಗೆ ಟ್ವೀಟ್ ಕೂಡ ಮಾಡಿರುವ ಪ್ರಧಾನಿ, ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಬೆಂಬಲದ ಭರವಸೆ ನೀಡಿರುವುದಾಗಿಯೂ ಹೇಳಿದ್ದಾರೆ.
ಪ್ರಧಾನಿ ಜೊತೆ ಬೊಮ್ಮಾಯಿ ಅವರು ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದರು ಎಂದು ಹೇಳಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಜೆ ಪಿ ನಡ್ಡಾ ಅವರನ್ನೂ ಭೇಟಿ ಮಾಡಿರುವ ಬೊಮ್ಮಾಯಿ, ಅವರಿಗೂ ಧನ್ಯವಾದ ಸಲ್ಲಿಸಿದರು.
