ಮೆಟ್ರೋರಾಜಕೀಯರಾಜ್ಯ

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ; ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಆರಗ ಜ್ಞಾನೇಂದ್ರ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿ, ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಗಡಿ ಜಿಲ್ಲೆಯಲ್ಲಿ ಕನ್ನಡ ಹಾಗೂ ಮರಾಠಿ ಮಾತನಾಡುವ ಜನತೆ, ಅತ್ಯಂತ ಅನ್ಯೋನ್ಯತೆ, ಪ್ರೀತಿ ಹಾಗೂ ಸಾಮರಸ್ಯದಿಂದ ಇದ್ದಾರೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ರಾಯಣ್ಣ ಹಾಗೂ ಶಿವಾಜಿ ಯವರಂಥ ಮಹನೀಯರ ಬಗ್ಗೆ ಎಳ್ಳಷ್ಟೂ ಗೌರವ ವಿಲ್ಲದ ದುಷ್ಕರ್ಮಿಗಳ ಒಂದೇ ಉದ್ದೇಶ, ಸಮಾಜದಲ್ಲಿನ ನೆಮ್ಮದಿಗೆ ಭಂಗ ತರುವುದಾಗಿದ್ದು, ಅವರನ್ನು ಬಗ್ಗು ಬಡಿಯಲಾಗುವುದು ಎಂದು ಎಚ್ಚರಿಸಿದ್ದಾರೆ.

ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ, ಸಂಬಂದಿಸಿದ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.

ಶಾಂತಿ ಹಾಗೂ ಸುವ್ಯವಸ್ತೆ ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು, ತೆಗೆದುಕೊಳ್ಳಲು ನಿರ್ದೇಶಿಸಿದ್ದೇನೆ ಎಂದೂ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button