ಮೆಟ್ರೋ

ಕಾಂಗ್ರೆಸ್ ವಿರುದ್ಧ ಆಕ್ಷೇಪ; ಬಿಜೆಪಿ ಕಾರ್ಯಕಾರಿಣಿಯಲ್ಲಿ ನಿರ್ಣಯ

ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಆಡಳಿತ ಮಾಡಿದ್ದ ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆ ಕೋವಿಡ್‍ನಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ಸಹಾಯಹಸ್ತ ನೀಡುವ ಬದಲು ಕೇವಲ ಋಣಾತ್ಮಕವಾಗಿ ಟೀಕೆ ಟಿಪ್ಪಣಿ ಮಾಡುತ್ತಿದೆ ಎಂದು ಬಿಜೆಪಿ ಟೀಕಿಸಿದೆ.

ಇಂದಿನ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ, ಕಾಂಗ್ರೆಸ್ ನಡೆಯನ್ನು ವಿರೋಧಿಸುವ ನಿರ್ಣಯ ಅಂಗೀಕರಿಸಲಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದರು.

ಕಾರ್ಯಕಾರಿಣಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಗೃಹ ಕಛೇರಿಯಿಂದ ವೆಬೆಕ್ಸ್ ಮೂಲಕ ಭಾಗವಹಿಸಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ರಾ, ಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರೂ ವೆಬೆಕ್ಸ್ ಮೂಲಕ ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button