ಮೆಟ್ರೋರಾಜ್ಯ

ಎನ್​ಡಿಆರ್​ಎಫ್ ಅಡಿಯಲ್ಲಿ ರಾಜ್ಯಕ್ಕೆ ನೆರವು ದೊರಕುವ ವಿಶ್ವಾಸವಿದೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿಗೆ ಎನ್.ಡಿ.ಆರ್.ಎಫ್ ಅಡಿಯಲ್ಲಿ ರಾಜ್ಯಕ್ಕೆ ಅಗತ್ಯ ನೆರವು ದೊರಕಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶನಿವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಅಧ್ಯಯನ ತಂಡ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಆಗಮಿಸಿದೆ ಎಂದರು.

ತಂಡದೊಂದಿಗೆ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಪೂರ್ವಭಾವಿ ಚರ್ಚೆ ನಡೆಸಲಾಗುವುದು. ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಯ ನಂತರ ಅಂತಿಮ ಸಭೆ ನಡೆಸಲಾಗುವುದು. ವರದಿಗಳನ್ನು ನೀಡಿ, ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ತಂಡದೊಂದಿಗೆ ಅಧಿಕಾರಿಗಳು ಪ್ರವಾಸ ಮಾಡಲಿದ್ದು ಎಲ್ಲಿ ಅತಿ ಹೆಚ್ಚು ಹಾನಿಯಾಗಿದೆ ಅಲ್ಲಿ ಭೇಟಿ ನೀಡಿ ವರದಿ ನೀಡಲಿದ್ದಾರೆ ಎಂದರು.

ರ್ಯಾಲಿ ಚುನಾವಣಾ ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುತ್ತಿರುವ ಕುರಿತು ಪ್ರತಿಕ್ರಿಯಿಸಿ, ಈ ಸಂಬಂಧ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button