ಮೆಟ್ರೋ
ಫೋನ್ ಕದ್ದಾಲಿಕೆಗೆ ಖಂಡನೆ; ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ಪ್ರದೇಶ ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನಕ್ಕೆ ಮುತ್ತಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೊದಲು, ವಿಧಾನಸೌಧ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಧರಣಿ ನಡೆಸಲಾಯಿತು.
ಧರಣಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮುಖಂಡರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್. ರಮೇಶ್ ಕುಮಾರ್, ಶಿವಾನಂದ ಪಾಟೀಲ್, ಶಿವಶಂಕರರೆಡ್ಡಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಲೀಂ ಅಹಮದ್, ಅಜಯ್ ಸಿಂಗ್, ನಾರಾಯಣಸ್ವಾಮಿ, ಎಸ್. ರವಿ ಮತ್ತಿತರರು ಭಾಗವಹಿಸಿದ್ದರು.
ಇದಕ್ಕೂ ಮುನ್ನ ವಿಧಾನಸೌಧದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು.



