ಮೆಟ್ರೋರಾಜ್ಯ

ರಾಜ್ಯದಲ್ಲಿ ಇಳಿಕೆಯಾಗುತ್ತಿರುವ ಕೊರೊನಾ ಕೇಸ್​ಗಳು

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 14,304 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 464 ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 14,304 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 2,61,8735ಕ್ಕೆ ಏರಿಕೆಯಾಗಿದೆ. ಇಂದು 464 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 29,554 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 29,271 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 22,90,861 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 3,50,066 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 3,418 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 276 ಸೋಂಕಿತರು ಸಾವನ್ನಪ್ಪಿದ್ದಾರೆ. 1,43,702 ಸಕ್ರಿಯ ಪ್ರಕರಣಗಳಿವೆ.

Spread the love

Related Articles

Leave a Reply

Your email address will not be published. Required fields are marked *

Back to top button