ಸಾರಿಗೆ ನೌಕರರ ಮುಷ್ಕರದ ಸುಳಿವು; ನಿಷೇಧಿಸಿ ಸರ್ಕಾರ ಆದೇಶ

ಬೆಂಗಳೂರು: ಸಾರಿಗೆ ನೌಕರರು ಮತ್ತೆ ಮುಷ್ಕರ ಹೂಡಲಿದ್ದಾರೆ ಎಂಬ ಸುಳಿವು ಸಿಕ್ಕಿದ್ದು. ಲಾಕ್ಡೌನ್ ಮುಗಿದ ಮೇಲೆ ಜುಲೈ 5 ರ ನಂತ್ರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಆದರೆ ಅದಕ್ಕೂ ಮೊದಲೇ ಅಗತ್ಯ ಸೇವೆಗಳ ಮುಷ್ಕರವನ್ನ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಜುಲೈ 1ರಿಂದ ಡಿಸೆಂಬರ್ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರವನ್ನು ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಕೊವಿಡ್ ಸಂಕಷ್ಟದಲ್ಲಿ ಜನರ ಸಾಕಷ್ಟು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು. ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ. ಹೀಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆರನೇ ವೇತನ ಆಯೋಗ ಜಾರಿ ಮಾಡಬೇಕು. ಎಂದು ಆಗ್ರಹಿಸಿ, ಕಳೆದ ಎಪ್ರಿಲ್ 7 ರಿಂದ ನಡೆಯುತ್ತಿದ್ದ ಮುಷ್ಕರವನ್ನು ಹೈಕೋರ್ಟ್ ಅದೇಶಕ್ಕೆ ಮಣಿದು ಸಾರಿಗೆ ನೌಕರರ ಸಂಘಟನೆಯು 15 ದಿನಗಳ ನಂತರ ಸ್ಥಗಿತಗೊಳಿಸಿತ್ತು. ಆಗ ಸರ್ಕಾರ ಮುಷ್ಕರದಲ್ಲಿ ಭಾಗಿಯಾಗಿದ್ದವರನ್ನು ವರ್ಗಾವಣೆ, ಅಮಾನತು, ಸಸ್ಪೆಂಡ್ ಮಾಡಿ ಮುಷ್ಕರವನ್ನು ಹತ್ತಿಕ್ಕಲು ಪ್ರಯತ್ನಿಸಿತ್ತು.



