ಮೆಟ್ರೋ
ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ಸರ್ಕಾರ ಬದ್ಧ: ಯಡಿಯೂರಪ್ಪ

ಬೆಂಗಳೂರು: ಬೆಂಗಳೂರಿನ ಜನರ ಜೀವನ ಮಟ್ಟದಲ್ಲಿ ಎಲ್ಲ ರೀತಿಯ ರೀತಿಯಲ್ಲಿಯೂ ಉತ್ಕøಷ್ಟತೆಯನ್ನು ಸಾಧಿಸುವ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ರೂಪಿಸುವುದರ ಜೊತೆಗೆ ಹಸಿರು ಬೆಂಗಳೂರು ಎಂಬ ಹೆಗ್ಗಳಿಕೆಯನ್ನು ಕಾಪಾಡಿಕೊಳ್ಳಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಂದು “ಕಾಡುಗೋಡಿ ವೃಕ್ಷೋದ್ಯಾನ” , ಕನ್ನಮಂಗಲ “ಸಸ್ಯಶಾಸ್ತ್ರೀಯ ತೋಟ” ,ಕನ್ನಮಂಗಲ ಕೆರೆ ಉದ್ಘಾಟನಾ ಕಾರ್ಯಕ್ರಮ ಹಾಗೂ “ಎಲೆ ಮಲ್ಲಪ್ಪ ಶೆಟ್ಟಿ ಕೆರೆ” ಪರಿವೀಕ್ಷಣೆ-ಜನಪದರು ರಂಗ ಮಂದಿರ ಉದ್ಘಾಟನೆ ಸಮಾರಂಭಗಳಲ್ಲಿ ಪಾಲ್ಗೊಂಡ ಅವರು ನಂತರ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು, ಮೂಲಸೌಕರ್ಯ ಅಭಿವೃದ್ಧಿ, ಪರಿಸರ ಸಂರಕ್ಷಣೆ ಹಾಗೂ ಹಸರೀಕರಣ, ಸ್ವಚ್ಚತೆ ಹಾಗೂ ಸುಗಮ ಸೇವಾ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.



