ಮೆಟ್ರೋರಾಜ್ಯ

ಪ್ರತಿಯೊಬ್ಬರಿಗೂ ಉಚಿತ ಲಸಿಕೆ; ಕೆಪಿಸಿಸಿ ಸಾಮಾಜಿಕ ಜಾಲತಾಣದಿಂದ ಹ್ಯಾಶ್​ಟ್ಯಾಗ್ ಅಭಿಯಾನ

ಮೇ 1 ರಿಂದ 18 ರಿಂದ 45 ವರ್ಷದ ಪ್ರತಿಯೊಬ್ಬರಿಗೂ ವ್ಯಾಕ್ಸಿನ್ ನೀಡುವುದಾಗಿ ಹೇಳಿಕೊಂಡ ಬಿಜೆಪಿ ಸರ್ಕಾರ ಈಗ ಮಾತು ಮರೆತಿದೆ ಎಲ್ಲೆಡೆಯೂ ವ್ಯಾಕ್ಸಿನ್​ಗಾಗಿ ಜನ ಹಾತೊರೆಯುತಿದ್ದಾರೆ. ಸೋಂಕಿನ ವಿರುದ್ಧ ಹೋರಾಡಲು ಜನರಿಗೆ ಲಸಿಕೆ ಅಗತ್ಯವಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದುಪ್ಪಟ್ಟು ದರಕ್ಕೆ ಲಸಿಕೆ ನೀಡಲಾಗುತ್ತಿದ್ದು. ಕೋವಿಡ್​ ಬಿಕ್ಕಟ್ಟಿನಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರ ಲಸಿಕೆಯನ್ನು ಉಚಿತವಾಗಿ ಜನರಿಗೆ ನೀಡಬೇಕು ಎಂದು ಆಗ್ರಹಿಸಿ ಜೂನ್ 2 ರಂದು ಕೆಪಿಸಿಸಿ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತುವ ಹ್ಯಾಸ್ ಟ್ಯಾಗ್ ಅಭಿಯಾನ ನಡೆಸಲು ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷ ಬಿ ಆರ್ ನಾಯ್ಡು ಕರೆ ನೀಡಿದ್ದಾರೆ.

ದೇಶದಲ್ಲಿ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡಬೇಕು. ಕೇಂದ್ರ ಸರ್ಕಾರ ದೇಶದ ಎಲ್ಲರಿಗೂ ಲಸಿಕೆ ಸಿಗುವಂತೆ ಮಾಡಲು ಲಸಿಕೆ ನೀತಿ ಪರಿಷ್ಕರಿಸಬೇಕು. ದೇಶದ ಎಲ್ಲ ಕಡೆಗಳಲ್ಲೂ ಪ್ರತಿ ನಾಗರಿಕನಿಗೂ ಉಚಿತವಾಗಿ ಲಸಿಕೆ ಸಿಗಬೇಕು ಎಂಬ ಬೇಡಿಕೆಗಳಿಗೆ ಆಗ್ರಹಿಸಿ ಈ ಟ್ರೆಂಡಿಂಗ್ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button