
ಬೆಂಗಳೂರು: ರಾಜ್ಯದಲ್ಲಿ ನ.1ರಿಂದ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುವ ಪರಿಣಾಮ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜ ನಗರದಲ್ಲಿ ಭಾರೀ ಮಳೆ ಸಂಭವಿಸಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಸುರಿಯಲಿದೆ.




