ಇಂದು ಭಾರತದ ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 105ನೇ ಜನ್ಮದಿನ

ನವದೆಹಲಿ: ಇಂದು ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರ 105ನೇ ಜನ್ಮದಿನ.
ಇಂದಿರಾ ಗಾಂಧಿಯವರು 1917ರಲ್ಲಿ ನವೆಂಬರ್ 19ರಂದು ಅಲಹಾಬಾದ್ನಲ್ಲಿ ಜನಿಸಿದರು.
ಇಂದಿರಾ ಗಾಂಧಿ ಅವರನ್ನು ಭಾರತದ ಐರನ್ ಲೇಡಿ ಎಂದೇ ಕರೆಯಲಾಗುತ್ತಿತ್ತು. ಇಂದಿರಾ ಗಾಂಧಿ ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮಗಳು. ಅವರ ತಾಯಿ ಕಮಲಾ ನೆಹರು ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನಾಯಕಿಯಾಗಿದ್ದರು. ಇಂದು ದೇಶಾದ್ಯಂತ ಇಂದಿರಾ ಗಾಂಧಿ ಜನ್ಮ ದಿನೋತ್ಸವ ಆಚರಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲೂ ಇಂದು ಕೇವಲ ಮಹಿಳೆಯರೇ ಪಾಲ್ಗೊಳ್ಳಲಿದ್ದಾರೆ. ಇಂದಿರಾ ಗಾಂಧಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿರುವ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಮಹಿಳೆಯರು ಜೊತೆಯಾಗಲಿದ್ದಾರೆ.
ಇಂದಿರಾ ಗಾಂಧಿಯವರ 105ನೇ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರು, ರಾಹುಲ್ ಗಾಂಧಿ ಮುಂತಾದವರು ಶುಭಾಶಯ ಕೋರಿದ್ದಾರೆ.
