Breaking NewsLatestರಾಷ್ಟ್ರೀಯಸುದ್ದಿ

UttaraKhand: ಉತ್ತರಾಖಂಡದಲ್ಲಿ ಕಮರಿಗೆ ಬಿದ್ದ ವಾಹನ​​ : 11 ಮಂದಿ ಸಾವು

ಉತ್ತರಾಖಂಡ: ಮದುವೆ ಸಮಾರಂಭದಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ವೇಳೆ ವಾಹನವೊಂದು ಕಮರಿಗೆ ಬಿದ್ದ ಪರಿಣಾಮ 11 ಮಂದಿ ಮೃತಪಟ್ಟ ಘಟನೆ ಚಂಪಾವತ್ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರು ಮತ್ತು ರಕ್ಷಣಾ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ.

ಇಲ್ಲಿ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಅಪಘಾತ ನಡೆದ ಸ್ಥಳದಲ್ಲಿ ಈವರೆಗೆ 11 ಮೃತದೇಹಗಳನ್ನು ಹೊರತೆಗೆದಿದ್ದೇವೆ. ನಮ್ಮ ಮಾಹಿತಿ ಪ್ರಕಾರ ವಾಹನದಲ್ಲಿ 14-15 ಮಂದಿ ಇದ್ದರು. ರಕ್ಷಣಾ ತಂಡವು ಇತರ ಜನರನ್ನು ಹುಡುಕುತ್ತಿದೆ ಎಂದು ಕುಮಾನ್ ಉಪ ಪೊಲೀಸ್ ಮಹಾನಿರೀಕ್ಷಕ (ಡಿಐಜಿ) ನೀಲೇಶ್ ಆನಂದ್ ಭರ್ನೆ ತಿಳಿಸಿದ್ದಾರೆ.

ವಾಹನದ ಚಾಲಕ ಅಪಘಾತದಲ್ಲಿ ಬದುಕುಳಿದಿದ್ದು, ಆತನನ್ನು ಸ್ಥಳೀಯ ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯಕ್ಕೆ ಪೊಲೀಸರು, ಎನ್​ಡಿಆರ್​ಎಫ್​ನೊಂದಿಗೆ ಸ್ಥಳೀಯರು ಭಾಗಿಯಾಗಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸಂತಾಪ ವ್ಯಕ್ತಪಡಿಸಿದ್ದು, ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎಂದು ಟ್ವೀಟ್​ ಮಾಡಿದ್ದಾರೆ.

ಉತ್ತರಾಖಂಡದ ಚಂಪಾವತ್‌ನಲ್ಲಿ ಸಂಭವಿಸಿದ ಅಪಘಾತವು ಹೃದಯ ವಿದ್ರಾವಕವಾಗಿದೆ. ಈ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇದೇ ರೀತಿಯ ಎರಡು ಅಪಘಾತಗಳಲ್ಲಿ ಹಲವರು ಸಾವನ್ನಪ್ಪಿದ್ದರು

Spread the love

Related Articles

Leave a Reply

Your email address will not be published. Required fields are marked *

Back to top button