Breaking NewsLatestರಾಜ್ಯಸುದ್ದಿ

ಕೇಂದ್ರದಿಂದ ಪ್ರತಿ ತಿಂಗಳು 16 ಲಕ್ಷ ಉದ್ಯೋಗ ಸೃಷ್ಟಿ

ಕೇಂದ್ರ ಸರ್ಕಾರ ಪ್ರತಿ ತಿಂಗಳು 16 ಲಕ್ಷ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಮಂಗಳವಾರದಂದು ರಾಜಸ್ಥಾನದ ಅಜ್ಮೀರ್ ನಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ.

ಇಡೀ ವಿಶ್ವವೇ ಆರ್ಥಿಕ ಹಿಂಜರಿತ ಎದುರಿಸುತ್ತಿರುವ ಈ ಸಂದರ್ಭದಲ್ಲಿಯೂ ಸಹ ಭಾರತ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಹೇಳಿದ ಅವರು, ಕೇಂದ್ರ ಸರ್ಕಾರದ ನೀತಿಗಳೇ ಇದಕ್ಕೆ ಕಾರಣ ಎಂದು ತಿಳಿಸಿದರು.

ಯುವ ಜನತೆ ದೇಶವೇ ಮೊದಲು ಎಂಬ ಧ್ಯೇಯ ವಾಕ್ಯವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ವಿಯಾಗುತ್ತಾರೆ ಎಂದು ತಿಳಿಸಿದ ಅವರು, ಅದು ಪ್ರತಿಯೊಬ್ಬರ ಕರ್ತವ್ಯವೂ ಕೂಡ ಹೌದು ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button