Breaking NewsLatestರಾಷ್ಟ್ರೀಯ
ತಮಿಳುನಾಡಿನಲ್ಲಿ ಪ್ರವಾಹ ಸೃಷ್ಟಿಸಿದ ಮಳೆ; ಐವರ ಸಾವು

ಚೆನೈ: ತಮಿಳುನಾಡಿನಲ್ಲಿ ನಿರಂತರ ಸುರಿಯುತ್ತಿರುವ ಮಳೆ ಪ್ರವಾಹ ಸೃಷ್ಟಿಸಿದ್ದು, ವಿವಿಧ ಅವಘಡಗಳಲ್ಲಿ ಐವರು ಮೃತಪಟ್ಟಿದ್ದಾರೆ.
ಚೆನೈನ ಹಲವು ರಸ್ತೆ ಮತ್ತು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಸುರಂಗ ಮಾರ್ಗಗಳು ಮುಚ್ಚಲ್ಪಟ್ಟಿವೆ. ಪೌರಕಾರ್ಮಿಕರು ಚರಂಡಿಗಳ ಹೂಳೆತ್ತುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇನ್ನೂ ಧಾರಾಕಾರ ಮಳೆ ಮುಂದುವರಿಯಲಿದೆ ಭಾರತದ ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.
ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿನೀಡಿ ಪರಿಹಾರ ವಿತರಿಸಿದರು. ನ.12ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ತಮಿಳುನಾಡು ಸೇರಿದಂತೆ ಕೇರಳ, ಮಧ್ಯಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಬಂಗಾಳಕೊಲ್ಲಿ ಮತ್ತು ಪಕ್ಕದ ದಕ್ಷಿಣ ಅಂಡಮಾನ್ ಸಮುದ್ರದ ಆಗ್ನೇಯ ದಿಕ್ಕಿನಲ್ಲಿ ಚಂಡಮಾರುತ ಪ್ರಸರಣಗೊಳ್ಳುವ ಸಾಧ್ಯತೆಯಿರುವ ಪರಿಣಾಮ ವಾಯುಭಾರ ಕುಸಿತಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
