Breaking NewsLatestಮೆಟ್ರೋರಾಜ್ಯಸುದ್ದಿ

Independence Day: ಇಂದಿನಿಂದ ನವಭಾರತ ನಿರ್ಮಾಣ : ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಬೊಮ್ಮಾಯಿ ಸಂಕಲ್ಪ

ಬೆಂಗಳೂರು : ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭವಾಗಲಿದೆ. ರೈತ ಕೇಂದ್ರಿತ ಅಭಿವೃದ್ಧಿ ಜತೆಗೆ ಹೊಸ ಚಿಂತನೆ, ಹೊಸ ದಾರಿ, ಹೊಸ ದಿಕ್ಸೂಚಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನುಡಿದರು.

75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಜ್ಯವನ್ನ ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಮೂಲಕ ಸೌಲಭ್ಯ ಸುಧಾರಣೆ ಹಾಗೂ ಆರ್ಥಿಕ ಅಭಿವೃದ್ಧಿಗಳೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಯೋಗ ಕ್ಷೇಮವೂ ನಮ್ಮ ಕಾಳಜಿಯಾಗಿದೆ ಎಂದರು.

ಇಂದಿನಿಂದಲೇ ನವ ಕರ್ನಾಟಕ ನಿರ್ಮಾಣ ಆರಂಭವಾಗುತ್ತದೆ. ಹೊಸ ಚಿಂತನೆ, ಹೊಸ ದಾರಿ, ಹೊಸ ದಿಕ್ಸೂಚಿ ಇದೆ. ರೈತನನ್ನು ಕೇಂದ್ರ ಬಿಂದುವಾಗಿ ಅಭಿವೃದ್ಧಿ ಮಾಡಬೇಕು. ರೈತ ಕೇಂದ್ರಿತ ಅಭಿವೃದ್ಧಿ ಚಿಂತನೆ ಮಾಡುತ್ತಿದ್ದೇವೆ. ಕೃಷಿ ಕ್ಷೇತ್ರದಲ್ಲಿ ಶೇ.1ರಷ್ಟು ಬೆಳವಣಿಗೆಯಾದರೆ, ಕೈಗಾರಿಕಾ ಕ್ಷೇತ್ರದಲ್ಲಿ ಶೇ.4ರಷ್ಟು ಬೆಳವಣಿಗೆಯಾಗುತ್ತೆ, ಸೇವಾ ವಲಯದಲ್ಲಿ ಶೇ.10ರಷ್ಟು ಬೆಳವಣಿಗೆಯಾಗುತ್ತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅಮೃತ ರೈತ ಉತ್ಪಾದಕ ಸಂಸ್ಥೆ ಯೋಜನೆಯನ್ನು ಘೋಷಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ, ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು ಸಂಸ್ಥೆಗಳ ಆರಂಭ ಮಾಡಲಾಗುವುದು. 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು. ಪ್ರತಿ ಸಂಸ್ಥೆಗೆ 30 ಲಕ್ಷ ರೂ.ನಂತೆ 3 ವರ್ಷ ನೀಡಲಾಗುವುದು. ಇದಕ್ಕಾಗಿ 225 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.

ಅಮೃತ ಗ್ರಾಮೀಣ ವಸತಿ ಯೋಜನೆಯಡಿ ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರು ಪೂರೈಕೆ ಮಾಡುವುದು. ಶೇ.100ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್, ಡಿಜಿಟಲ್ ಗ್ರಂಥಾಲಯಗಳೊಂದಿಗೆ ಶಾಲೆ ಸ್ಥಾಪನೆ. ಶಾಲೆಗಳ ಸಮಗ್ರ ಮೂಲಸೌಕರ್ಯದೊಂದಿಗೆ ಅಭಿವೃದ್ಧಿ ಮಾಡಲಾಗುವುದು ಎಂದು ಸಿಎಂ ಬೊಮ್ಮಯಿ ತಿಳಿಸಿದರು.

ಅಮೃತ ನಿರ್ಮಲ ನಗರ ಯೋಜನೆ, ಅಮೃತ ಶಾಲಾ ಸೌಲಭ್ಯ ಯೋಜನೆಯನ್ನ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ಹಾಗೆಯೇ 750 ಅಂಗನವಾಡಿ ಕೇಂದ್ರಗಳು ಮೇಲ್ದರ್ಜೆಗೆ ಅಮೃತ ಅಂಗನವಾಡಿ ಯೋಜನೆಯಡಿ ಪ್ರತಿ ಅಂಗನವಾಡಿ 1 ಲಕ್ಷ ರೂಪಾಯಿ ನೀಡಲಾಗುವುದು. ಇದಕ್ಕಾಗಿ 7.5 ಕೋಟಿ ರೂ. ವಿನಿಯೋಗಿಸಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ದೃಢಸಂಕಲ್ಪದ ಪರಿಣಾಮವಾಗಿ ಹಾಗೂ ನಿಕಟಪೂರ್ವ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಇವತ್ತಿಂದ ನವಕರ್ನಾಟಕ ಆಗಲಿದೆ ಎಂದು ನಾನು ಘೋಷಣೆ ಮಾಡುತ್ತೇನೆ. ಈಗ 20 ತಿಂಗಳು ಮಾತ್ರ ಅಧಿಕಾರ ಇದೆ. ಇಷ್ಟು ದಿನದಲ್ಲಿ ಯಾವುದು ಮಾಡಬಹುದು ಅದನ್ನು ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂಕಲ್ಪ ತೊಟ್ಟರು.

Spread the love

Related Articles

Leave a Reply

Your email address will not be published. Required fields are marked *

Back to top button