Breaking NewsLatestರಾಜ್ಯಸುದ್ದಿ

ರಾಜಧಾನಿಯಲ್ಲಿ ಮತ್ತೆ ಹೆಚ್ಚಾಯ್ತು ಕೋವಿಡ್ ಕೇಸ್; 24 ಗಂಟೆ 77 ಪಾಸಿಟೀವ್!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯಲ್ಲಿ ಕಡಿಮೆಯಾಗುತ್ತಿದ್ದ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 77 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಒಂದು ಸಾವು ವರದಿಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 40,057ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ನಿನ್ನೆ 73 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,81,986ಕ್ಕೆ ಏರಿಕೆಯಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 44 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,04,342ಕ್ಕೆ ಏರಿಕೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button