Breaking NewsLatestರಾಷ್ಟ್ರೀಯ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಸೇತುವೆ ಮುರಿದು 9 ಪ್ರವಾಸಿಗರ ಸಾವು

ಶಿಮ್ಲಾ : ಗುಡ್ಡದ ಮೇಲ್ಭಾಗದಲ್ಲಿದ್ದ ಕಲ್ಲು ಬಂಡೆಗಳು ಇದ್ದಕ್ಕಿದ್ದಂತೆ ಕುಸಿದುಬಿದ್ದು ಸೇತುವೆಯೊಂದು ಮುರಿದು ಬಿದ್ದ ಪರಿಣಾಮ 9 ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸಾಂಗ್ಲಾ ಕಣಿವೆಯಲ್ಲಿ ಭಾನುವಾರ ನಡೆದಿದೆ.

ಸೇತುವೆಯ ಬಳಿ ಪ್ರವಾಸಿಗರ ವಾಹನಗಳಿದ್ದವು. ಅದರ ಮೇಲೆ ಬಂಡೆ ಉರುಳಿ ಬಿದ್ದಿದ್ದರಿಂದಾಗಿ ಅವರ 11 ಪ್ರವಾಸಿಗರಿಗೆ ಗಾಯವಾಗಿದೆ. ಅದರಲ್ಲಿ 9 ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ಕಿನ್ನೌರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಾಜು ರಾಮ್ ರಾಣಾ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಾಳುವಾದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೈದ್ಯರ ತಂಡವನ್ನೂ ಕರೆಸಲಾಗಿದೆ. ಘಟನೆಯ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದುಕೊಂಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button