Breaking NewsLatestರಾಷ್ಟ್ರೀಯವಿದೇಶಸುದ್ದಿ

ರಷ್ಯಾಗೆ ಮತ್ತೊಮ್ಮೆ ವಾರ್ನಿಂಗ್!

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. ದಾಳಿಯನ್ನು ಎದುರಿಸುವ ಮೂಲಕ ಉಕ್ರೇನ್ ರಷ್ಯಾಗೆ ತಕ್ಕ ಉತ್ತರ ನೀಡುತ್ತಿದೆ. ಉಕ್ರೇನ್‌ ಮಣಿಸಲು ರಷ್ಯಾ ಪರಮಾಣು ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ ಎಂಬ ಸುದ್ದಿಗಳೂ ಹೊರಬರುತ್ತಿವೆ.

ಇದೀಗ ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಜೋ ಬಿಡನ್ ರಷ್ಯಾಕ್ಕೆ ಎಚ್ಚರಿಕೆ ನೀಡಿದ್ದಾರೆ.

ʻಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ, ಅದು ರಷ್ಯಾ ಮಾಡುವ ದೊಡ್ಡ ತಪ್ಪುʼ ಎಂದು ಬಿಡೆನ್ ಬಣ್ಣಿಸಿದ್ದಾರೆ. ಪರಮಾಣು ಶಸ್ತ್ರಾಸ್ತ್ರಗಳನ್ನು ನಿಯೋಜಿಸಲು ರಷ್ಯಾ ತಯಾರಿ ನಡೆಸುತ್ತಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಡೆನ್, ಈ ಬಗ್ಗೆ ಪ್ರಸ್ತುತ ಯಾವುದೇ ದೃಢೀಕರಣವನ್ನು ನೀಡಲು ಸಾಧ್ಯವಿಲ್ಲ.

ಅದಕ್ಕೂ ಮೀರಿ ರಷ್ಯಾ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ, ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರಿನ್ ಜೀನ್-ಪಿಯರ್, ಬಿಡೆನ್ ಈ ವಿಷಯದ ಬಗ್ಗೆ ಸಂಪೂರ್ಣವಾಗಿ ಸ್ಪಷ್ಟವಾಗಿದ್ದಾರೆ ಎಂಬುದನ್ನು ತಿಳಿಸಿದರು.

ರಷ್ಯಾ-ಉಕ್ರೇನ್ ಸಮಸ್ಯೆಯನ್ನು ನಾವು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದೇವೆ. ರಷ್ಯಾ ಪರಮಾಣು ಶಸ್ತ್ರಾಸ್ತ್ರಗಳೊಂದಿಗೆ ಮಿಲಿಟರಿ ವ್ಯಾಯಾಮ ನಡೆಸಲು ಯೋಜಿಸುತ್ತಿದೆ ಎಂದು ಯುಎಸ್ ಸರ್ಕಾರ ಇತ್ತೀಚೆಗೆ ಹೇಳಿತ್ತು. ಇದಕ್ಕೆ ಪೂರಕವಾಗಿ ರಷ್ಯಾ ರಹಸ್ಯವಾಗಿ ಹಲವು ಚಟುವಟಿಕೆಗಳನ್ನು ಮಾಡುತ್ತಿದೆ ಎಂದು ಉಕ್ರೇನ್ ಸಹ ಹೇಳಿದೆ.

Spread the love

Related Articles

Leave a Reply

Your email address will not be published. Required fields are marked *

Back to top button