Breaking NewsLatestರಾಷ್ಟ್ರೀಯಸುದ್ದಿ

ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಆಮ್ ಆದ್ಮಿ ಪಕ್ಷ

ಗುಜರಾತ್: ಇಸುದಾನ್ ಗಢ್ವಿ ಅವರನ್ನು ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಎಎಪಿ ಘೋಷಿಸಿದೆ.

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದರು.

ಇಸುದಾನ್ ಗಢ್ವಿ ಎಎಪಿಯ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇವರು ಮಾಜಿ ಟಿವಿ ಪತ್ರಕರ್ತರಾಗಿದ್ದು 2021 ರಲ್ಲಿ ಎಎಪಿಗೆ ಸೇರಿದ್ದರು. ಗಾಢ್ವಿ ಅವರು ಆರಂಭದಲ್ಲಿ ದೂರದರ್ಶನದಲ್ಲಿ ಕೆಲಸ ಮಾಡಿದ್ದರು. ನಂತರ ಪತ್ರಕರ್ತರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು.

ಅವರು ಗುಜರಾತ್‌ನ ಡ್ಯಾಂಗ್ ಜಿಲ್ಲೆಯಲ್ಲಿ ಅರಣ್ಯನಾಶದ 150 ಕೋಟಿ ಹಗರಣದ ಬಗ್ಗೆ ಬಹಿರಂಗಪಡಿಸಿದರು, ಈ ಪ್ರಕರಣ ಕೆಲವೊಂದು ತಪ್ಪಿತಸ್ಥರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರವನ್ನು ಪ್ರೇರೇಪಿಸಿತು.

ಗುಜರಾತ್ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ. ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಡಿಸೆಂಬರ್ 1 ರಂದು ಚುನಾವಣೆ ನಡೆಯಲಿದೆ. ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button