Breaking NewsLatestಕಲಬುರ್ಗಿಕ್ರೈಂಜಿಲ್ಲಾ ಸುದ್ದಿರಾಜ್ಯಸುದ್ದಿ

ದಿವ್ಯಾ ಹಾಗರಗಿ ನಾಪತ್ತೆ, ಸಿಎಂಗೆ ತೆಲೆ ನೋವು: ಸಿಎಂಗೆ ಮುತ್ತಿಗೆ ಹಾಕಲು ಯತ್ನಿಸಿದ ಆಪ್ ಕಾರ್ಯಕರ್ತರು!

ಕಲಬುರಗಿ: ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಬಂಧಿಸುವಂತೆ ಆಪ್ ಕಾರ್ಯಕರ್ತರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಮುಂಜಾಗೃತ ಕ್ರಮವಾಗಿ 10ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

ಒಂದು ಕಡೆ ಸಿಐಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಕಳೆದ 10 ದಿನಗಳಿಂದ ಅಕ್ರಮ ನೇಮಕಾತಿ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ತೆಲೆಮರೆಸಿಕೊಂಡಿದ್ದಾರೆ. ಹಾಗರಗಿ ಬಂಧನಕ್ಕೆ ಸಿಐಡಿ ಅಧಿಕಾರಿಗಳು ಶೋಧ ಮುಂದುವರೆಸಿದ್ದು ಕಲಬುರಗಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಅವರಿಗೆ ಇದು ತಲೆಬಿಸಿಯಾಗಿ ಪರಿಣಮಿಸಿದೆ‌‌.

ನಿನ್ನೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಕಾರ್ ಮುತ್ತಿಗೆಗೆ ಯತ್ನಿಸಿದರು. ಇದೀಗ ಆಪ್‌ ಕಾರ್ಯಕರ್ತರು ದಿವ್ಯ ಬಂಧನಕ್ಕೆ ಸಿಎಂ ಮುತ್ತಿಗೆಗೆ ಯತ್ನಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button