Breaking NewsLatestಜಿಲ್ಲಾ ಸುದ್ದಿರಾಜ್ಯಸುದ್ದಿಹುಬ್ಬಳ್ಳಿ - ಧಾರವಾಡ
ಎಸಿಬಿ ದಾಳಿ: ಸಿಕ್ಕಿ ಬಿದ್ದ ಸಣ್ಣ ನೀರಾವರಿ ಇಲಾಖೆಯ ದೊಡ್ಡ ತಿಮಿಂಗಲ!

ಧಾರವಾಡ: ಎಸಿಬಿ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿ ಸಣ್ಣ ನೀರಾವರಿ ಇಲಾಖೆಯ ದೊಡ್ಡ ತಿಮಿಂಗಿಲವೊಂದನ್ನ ಬಲೆಗೆ ಕೆಡವಿದ್ದಾರೆ. ಧಾರವಾಡದ ಸಣ್ಣ ನೀರಾವರಿ ಇಲಾಖೆಯ ವಿಚಕ್ಷಣ ವಿಭಾಗದ ಎಇಇ ಅವರ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 17 ಲಕ್ಷ 80 ಸಾವಿರ ರೂಪಾಯಿ ಹಣವನ್ನ ವಶಕ್ಕೆ ಪಡೆದಿದ್ದಾರೆ.
ಧಾರವಾಡದ ಸತ್ತೂರು ಲೇಔಟ್‌ನಲ್ಲಿದ್ದ ಸಣ್ಣ ನೀರಾವರಿ ಇಲಾಖೆಯ ಎಇ ಅವರ ಮನೆಯಿಂದ ಎಇಇ ಎಸ್.ಮಂಜಿನಾಳ ಹಾಗೂ ಮಂಜಿನಾಳ ಅವರ ಸಂಬಂಧಿ ಮಹಾಂತೇಶ ಎಂಬುವವರು ಹಣ ತೆಗೆದುಕೊಂಡು ಹೊರಟಿದ್ದರು. ಈ ವೇಳೆ ಎಸಿಬಿ ಅಧಿಕಾರಿಗಳು ಅವರ ಮೇಲೆ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಎಇ ಅವರ ಮನೆಯಿಂದ ಹಣ ಪಡೆದುಕೊಂಡು ಎಇಇ ಅವರ ಮನೆಗೆ ಹೋಗಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಮಹಾಂತೇಶ ಜಿದ್ದಿ ನೇತೃತ್ವದ ಅಧಿಕಾರಿಗಳ ತಂಡ ಈ ದಾಳಿ ನಡೆಸಿದ್ದು ಹಣ ಮತ್ತು ದಾಖಲೆಗಳ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ
