Breaking NewsLatestರಾಷ್ಟ್ರೀಯಸುದ್ದಿ

ಖ್ಯಾತ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಹಿರಿಯ ನಟ ಕಮಲ್ ಹಾಸನ್ ಚೆನ್ನೈನ ಶ್ರೀರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 68 ವರ್ಷದ ಕಮಲ್ ಹಾಸನ್ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು, ಅಭಿನಯ ಮತ್ತು ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ.

ತಮಿಳು ‘ಬಿಗ್ ಬಾಸ್ ಸೀಸನ್ 6’ ನಡೆಸಿಕೊಡುತ್ತಿದ್ದಾರೆ. ಕಮಲ್ ಹಾಸನ್ ನಟಿಸಿ ನಿರ್ಮಾಣ ಮಾಡಿದ್ದ ‘ವಿಕ್ರಂ’ ಸೂಪರ್ ಹಿಟ್ ಆಗಿತ್ತು. ಇದೀಗ ಅವರು ‘ಇಂಡಿಯನ್ 2’ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಕಮಲ್ ಹಾಸನ್ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಆದರೆ, ಆಸ್ಪತ್ರೆಯ ವೈದ್ಯರು ಆತಂಕ ಪಡುವ ಅಗತ್ಯವಿಲ್ಲ. ಸಾಮಾನ್ಯ ಆರೋಗ್ಯ ತಪಾಸಣೆಗೆ ಕಮಲ್ ಹಾಸನ್ ಅಡ್ಮಿಟ್ ಆಗಿದ್ದಾರೆ ಎಂದು ಹೇಳಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button