Breaking NewsLatestಮನರಂಜನೆಸಿನಿಮಾಸ್ಯಾಂಡಲ್ ವುಡ್

ವೃದ್ಧಾಶ್ರಮಗಳಲ್ಲಿ ಅನ್ನದಾನ ನಡೆಸಿ ಪುನೀತ್​ಗೆ ಗೌರವ ಸಲ್ಲಿಸಿದ ವಿಶಾಲ್

ಮೊನ್ನೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಸಂಭ್ರಮಿಸಿದ್ದಾರೆ. ಅವರ ಅಭಿಮಾನಿ ಸಂಘಟನೆಗಳು ಸಾಮಾಜಿಕ ಕಾರ್ಯಗಳ ಮೂಲಕ ಜನ್ಮದಿನವನ್ನು ಆಚರಿಸಿದ್ದರು. ಈ ವೇಳೆ ರಕ್ತದಾನ ಮತ್ತು ಅನ್ನದಾನ ಶಿಬಿರಗಳನ್ನು ಆಯೋಜಿಸಿದ್ದಾರೆ. ಜೇಮ್ಸ್ ವೀಕ್ಷಿಸಿದ ನಂತರ ನೇತ್ರದಾನ ಹಾಗೂ ದೇಹದಾನಕ್ಕೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ತಮ್ಮ ಹೆಸರನ್ನು ನೋಂದಾಯಿಸಿದ್ದರು.

ಇನ್ನು ಪುನೀತ್ ಗೆಳೆಯ ನಟ ವಿಶಾಲ್ ಕೂಡ ಪ್ರೀತಿಯ ಸ್ನೇಹಿತನ ಜನ್ಮದಿನವನ್ನು ಆಚರಿಸಿದ್ದಾರೆ. ಈ ವೇಳೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಚೆನ್ನೈನ ಸುತ್ತಮುತ್ತಲಿನ ವೃದ್ಧಾಶ್ರಮಗಳಲ್ಲಿರುವ ಸುಮಾರು 200ಕ್ಕೂ ಹೆಚ್ಚು ವಯೋವೃದ್ಧರಿಗೆ ವಿಶಾಲ್ ಅನ್ನದಾನ ನಡೆಸಿದ್ದಾರೆ. ಈ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಪವರ್​ಸ್ಟಾರ್​ಗೆ ಗೌರವ ಸಲ್ಲಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button