Breaking NewsLatestರಾಷ್ಟ್ರೀಯಸುದ್ದಿ

ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ಸ್ವರಾ ಭಾಸ್ಕರ್

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಗುರುವಾರ ಪಾಲ್ಗೊಂಡು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು.ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಸ್ವರಾ ಭಾಸ್ಕರ್ ಅವರು ರಾಹುಲ್ ಗಾಂಧಿಯವರೊಂದಿಗೆ ಇರುವ ಚಿತ್ರವನ್ನು ಹಂಚಿಕೊಂಡಿದೆ.

‘ಇಂದು ಪ್ರಸಿದ್ಧ ನಟಿ ಸ್ವರಾ ಭಾಸ್ಕರ್ ಅವರು ಭಾರತ್ ಜೋಡೋ ಯಾತ್ರೆಯ ಭಾಗವಾದರು. ಸಮಾಜದ ಪ್ರತಿಯೊಂದು ವರ್ಗದ ಉಪಸ್ಥಿತಿಯು ಈ ಯಾತ್ರೆಯನ್ನು ಯಶಸ್ವಿಗೊಳಿಸಿದೆ’ ಕಾಂಗ್ರೆಸ್ ಟ್ವೀಟ್ನಲ್ಲಿ ಬರೆದುಕೊಂಡಿದೆ. ಸ್ವರಾ ಭಾಸ್ಕರ್ ಅವರು ಸಮಕಾಲೀನ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಮೂಲಕ ಹೆಸರಾಗಿದ್ದು, ಕಾಂಗ್ರೆಸ್ ಟ್ವೀಟ್ ಅನ್ನು ರೀಟ್ವೀಟ್ ಮಾಡಿಕೊಂಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button