Breaking NewsLatestರಾಷ್ಟ್ರೀಯಸುದ್ದಿ

24 ಸಚಿವರ ರಾಜೀನಾಮೆ ಪಡೆದ ಜಗನ್ ಮೋಹನ್ ರೆಡ್ಡಿ

ಅಮರಾವತಿ: ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಎಲ್ಲಾ 24 ಸಚಿವರು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಏಪ್ರಿಲ್ 11ರಂದು ಆಂಧ್ರಪ್ರದೇಶದಲ್ಲಿ ಹೊಸ ಸಚಿವ ಸಂಪುಟ ರಚನೆ ಆಗಲಿದೆ. ಈ ಹಿನ್ನೆಲೆಯಲ್ಲಿ ಜಗನ್ಮೋಹನ್ ರೆಡ್ಡಿ, ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್ ಅವರೊಂದಿಗೆ ಸಭೆ ನಡೆಸಿದ್ದು, ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದಲ್ಲಿ ಹೊಸ ಆಡಳಿತಾತ್ಮಕ ನಕ್ಷೆಯನ್ನು ರಚಿಸಲಾಗಿದೆ. 13 ಹೊಸ ಜಿಲ್ಲೆಗಳೊಂದಿಗೆ ಆಂಧ್ರಪ್ರದೇಶದ ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಹೆಚ್ಚಿಸಲಾಗಿದೆ. ಇದನ್ನ ಮನಗಂಡು ಜಿಲ್ಲಾವಾರು ಅವಕಾಶ ಕಲ್ಪಿಸುವ ಸಲುವಾಗಿ ಸಚಿವ ಸಂಪುಟ ಪುನಾರಚನೆಗೆ ಮುಂದಾಗಿದ್ದಾರೆ ವೈ.ಎಸ್ ಜಗನ್.

Related Articles

Leave a Reply

Your email address will not be published. Required fields are marked *

Back to top button