Breaking NewsLatestರಾಜಕೀಯರಾಷ್ಟ್ರೀಯಸುದ್ದಿ
ಅಖಿಲೇಶ್ ಯಾದವ್ ಸ್ಪರ್ಧೆ: ಗೊಂದಲಗಳಿಗೆ ತೆರೆ

ಲಖ್ನೋ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ಅಶುತೋಷ್ ವರ್ಮಾ ಗುರುವಾರ ತಿಳಿಸಿದ್ದಾರೆ.
ಅಜಂಗಢ ಕ್ಷೇತ್ರದ ಸಂಸದರಾಗಿರುವ ಅಖಿಲೇಶ್ ತಮ್ಮ ಕ್ಷೇತ್ರದ ಜನರೊಂದಿಗೆ ಸಂವಾದ ಮಾಡಿದ ನಂತರ ಸ್ಪರ್ದೆ ಬಗ್ಗೆ ನಿರ್ಧರಿಸುವುದಾಗಿ ಬುಧವಾರವಷ್ಟೆ ಹೇಳಿದ್ದರು.
ಪಕ್ಷದ ಅಧ್ಯಕ್ಷರು ಮೈನ್‌ಪುರಿಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವಕ್ತಾರ ಅಶುತೋಷ್ ವರ್ಮಾ ಸ್ಪಷ್ಟ ಪಡಿಸಿಸುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
