Breaking NewsLatestಜಿಲ್ಲಾ ಸುದ್ದಿಮೆಟ್ರೋರಾಯಚೂರು

ಅಂಬೇಡ್ಕರ್‌ಗೆ ಅಪಮಾನ ಪ್ರಕರಣ : ರಾಯಚೂರಿನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವರ್ಗಾವಣೆ

ಬೆಂಗಳೂರು : ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದರೆಂಬ ಆರೋಪ ಎದುರಿಸುತ್ತಿದ್ದ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದಾರೆ.

ಸಿಜೆ ಅವರ ನಿರ್ದೇಶನದ ಮೇರೆಗೆ ರಾಯಚೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿನಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.

ಈವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರಾದ ಎಸ್. ಎಚ್. ರೇಣುಕಾದೇವಿ ಅವರು ಫೆ.28ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಮಲ್ಲಿಕಾರ್ಜುನ ಗೌಡ ಅವರನ್ನು ನೇಮಿಸಲಾಗಿದ್ದು, ಈ ಆದೇಶ ಫೆ.28 ರಿಂದ ಜಾರಿಗೆ ಬರಲಿದೆ.

ಘಟನೆ ಏನು?

ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನಡೆಯುತ್ತಿದ್ದ ಸ್ಥಳದಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಲಾಗಿತ್ತು. ಆದರೆ, ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಧ್ವಜಾರೋಹಣ ಸ್ಥಳದಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸಿದ್ದರು. ಇದು ವಿವಾದಕ್ಕೆ ಗುರಿಯಾಗಿತ್ತು. ಮಲ್ಲಿಕಾರ್ಜುನ ಗೌಡ ಅವರ ವರ್ಗಾವಣೆಗೆ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

Spread the love

Related Articles

Leave a Reply

Your email address will not be published. Required fields are marked *

Back to top button