Breaking NewsLatestರಾಜ್ಯಸುದ್ದಿ

ಬಿಎಸ್​ವೈ ಹುಟ್ಟುಹಬ್ಬ ಹಿನ್ನೆಲೆ ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಣೆ

ಬೆಂಗಳೂರು:ಇಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ್ ನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್, ಎಂಎಲ್​ಸಿ ನಾರಾಯಣಸ್ವಾಮಿ ಸೇರಿದಂತೆ ಕೆಲವು ಮಂದಿ ಭಾಗಿಯಾಗಿದ್ರು. ಜೊತೆಗೆ ಬಿಎಸ್​ವೈ ಬರ್ತಡೇ ಹಿನ್ನೆಲೆ ಬೆಂಗಳೂರಿನ ಅಣ್ಣಮ್ಮ ದೇವಿ ದೇವಸ್ಥಾನದಲ್ಲಿ ಯಡಿಯೂರಪ್ಪ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕುಮಾರಕೃಪ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಬಿಎಸ್​ವೈ ರೈತರಿಗೆ ಉಚಿತ ಟ್ರ್ಯಾಕ್ಟರ್​ಗಳನ್ನ ವಿತರಣೆ ಮಾಡಿದ್ರು. ಮತ್ತೊಂದೆಡೆ ಸಚಿವ ಕೆ.ಗೋಪಾಲಯ್ಯ, ಸಂಸದ ಡಿ.ವಿ.ಸದಾನಂದಗೌಡ ನಂದಿನಿ ಬಡಾವಣೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ವಿಕಲ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಮಾಡಿದ್ದಾರೆ. ಬಿಎಸ್​ವೈ ಅವರಿಗೆ ಸಚಿವರಾದ ಎಸ್​.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಭೈರತಿ ಬಸವರಾಜ್, ಎಸ್​.ಆರ್​. ವಿಶ್ವನಾಥ್ ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಶುಭ ಹಾರೈಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button