Breaking NewsLatestಮನರಂಜನೆಸಿನಿಮಾಸ್ಯಾಂಡಲ್ ವುಡ್

ಇಂದಿನಿಂದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸಿಎಂ ಚಾಲನೆ

ಬೆಂಗಳೂರು: ಇಂದಿನಿಂದ ಏಳು ದಿನಗಳ ಕಾಲ 13ನೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಜಿ.ಕೆ.ವಿ.ಕೆ ಸಭಾಂಗಣದಲ್ಲಿ ಸಂಜೆ 4.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಎಂ.ರಾಜೀವ್ ಚಂದ್ರಶೇಖರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್, ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್, ಆಹಾರ, ನಾಗರೀಕ ಸರಬರಾಜು ಸಚಿವ ಕೆ.ಗೋಪಾಲಯ್ಯ, ತೋಟಗಾರಿಕೆ ಸಚಿವ ಮುನಿರತ್ನ, ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂಟಿಬಿ ನಾಗರಾಜ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಎಂ.ಕೃಷ್ಣಪ್ಪ, ಎಂ.ಸತೀಶ್ ರೆಡ್ಡಿ, ಬಿ.ಕೆ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button