Breaking NewsLatestರಾಷ್ಟ್ರೀಯವಾಣಿಜ್ಯ
ಮಲ್ಯ, ನೀರವ್ ಮೋದಿ, ಚೋಕ್ಸಿ ಆಸ್ತಿ ಜಪ್ತಿ; ಬ್ಯಾಂಕ್ಗೆ ವರ್ಗಾಯಿಸಿದ ಇ.ಡಿ

ನವದೆಹಲಿ: ಬ್ಯಾಂಕ್ ಗಳಿಗೆ ಸಾಲ ಪಡೆದು ವಂಚನೆ ಮಾಡಿ ಪರಾರಿಯಾಗಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಹಾಗೂ ಮೆಹುಲ್ ಚೋಕ್ಸಿಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದ್ದು, ಅವರ 18.170 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದೆ.
ಆಸ್ತಿ ಜಪ್ತಿ ಮಾಡಿರುವ ಜಾರಿ ನಿರ್ದೇಶನಾಯ (ಇಡಿ) ಬ್ಯಾಂಕ್ ಗಳಿಗೆ ವರ್ಗಾವಣೆ ಮಾಡಿದೆ. ನೀರವ್ ಮೋದಿ, ವಿಜಯ್ ಮಲ್ಯ ಹಾಗೂ ಮೆಹುಲ್ ಚೋಕ್ಸಿಗೆ ಸಾಲ ನೀಡಿ ನಷ್ಟಕ್ಕೀಡಾಗಿದ್ದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿಯನ್ನ ಇಡಿ ಹಸ್ತಾಂತರಿಸಲಾಗಿದೆ.
ಈಗ ಬ್ಯಾಂಕ್ ಗಳು ಮೂವರು ಉದ್ಯಮಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಕೋರ್ಟ್ ಆದೇಶದ ಪ್ರಕಾರ ಹರಾಜು ಹಾಕಿ ಸಾಲದ ಹಣ ವಸೂಲಿಗೆ ಕ್ರಮ ಕೈಗೊಳ್ಳಬಹುದು ಎನ್ನಲಾಗಿದೆ.
