Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ ಹೆಚ್ಚಳ

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿದೆ. ಆದರೆ, ಮೋಡ ಕವಿದ ವಾತಾವರಣ ಮುಂದುವರೆದಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ತುಂತುರು

ಸುರಿಯುವ ನಿರೀಕ್ಷೆಯಿದೆ. ಇದರ ಜೊತೆ ಚಳಿಯೂ ಹೆಚ್ಚಾಗಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು ಕರಾವಳಿಯ ಸುಮಾರು 20 ಜಿಲ್ಲೆಗಳಲ್ಲಿ ಇಂದು (ನ. 17) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಗುರ ಮಳೆಯಾಗುತ್ತಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ.

ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಚದುರಿದ ವ್ಯಾಪಕ ಮಳೆಯಾಗಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button