Breaking NewsLatestರಾಷ್ಟ್ರೀಯಸುದ್ದಿ

ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣವಚನ

ಧುರಿ: ಪಂಜಾಬ್ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ ಭರ್ಜರಿ ಬಹುಮತ ಅಧಿಕಾರಕ್ಕೇರಲಿದೆ. ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಧುರಿ ಕ್ಷೇತ್ರದಲ್ಲಿ ಜಯದ ಪತಾಕೆ ಹಾರಿಸಿದ್ದು, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ನವಾನ್‌ಶಹರ್ ಜಿಲ್ಲೆಯ ಖಟ್ಕರ್‌ಕಲನ್‌ನಲ್ಲಿ ಪಂಜಾಬ್‌ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಖಟ್ಕರ್‌ಕಲನ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಹೇಳಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button