Breaking NewsLatestಜಿಲ್ಲಾ ಸುದ್ದಿರಾಜಕೀಯಶಿವಮೊಗ್ಗಸುದ್ದಿ

ಹರ್ಷ ಕೊಲೆ: ಆರೋಪ ಮಾಡಿದವರಿಗೆ ನಿಧಾನಕ್ಕೆ ಉತ್ತರ ಲಭಿಸಲಿದೆ: ಈಶ್ವರಪ್ಪ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ಇಂದು, ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹರ್ಷ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಈಶ್ವರಪ್ಪ ಅವರು, ಹಿಂದೂ ಸಂಘಟನೆಯ ಹರ್ಷ ಕಗ್ಗೊಲೆ ಆಗುವ ಕಲ್ಪನೆ ನಮಗ್ಯಾರಿಗೂ ಇರಲಿಲ್ಲ. ಕಗ್ಗೊಲೆ ಆದ ತಕ್ಷಣ ಕೊಲೆಗಡುಕ ಗೂಂಡಾಗಳನ್ನು ರಾಜ್ಯ ಸರಕಾರ ಬಂಧಿಸಿದೆ ಎಂದರು.

ಕೊಲೆಗಡುಕರು ಮತ್ತು ಘಟನೆಯ ಹಿಂದಿರುವ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರಕಾರದಿಂದಲೂ ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದ ಅವರು, ಹರ್ಷ ಕುಟುಂಬಕ್ಕೆ ನೆರವಾದ ಹಿಂದೂ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ವಿಚಾರದಲ್ಲಿ ಆರೋಪ ಮಾಡಿದವರಿಗೆ ನಿಧಾನಕ್ಕೆ ಉತ್ತರ ಲಭಿಸಲಿದೆ. ಪಕ್ಷ ಮತ್ತು ಸರಕಾರ ಕೈಗೊಳ್ಳುವ ಕ್ರಮ ನಿಧಾನವಾಗಿ ಗೊತ್ತಾಗಲಿದೆ ಎಂದು ಮೇಲ್ಮನೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಿರುದ್ಧ ಪರೋಕ್ಷವಾಗಿ ತಿರುಗೇಟು ನೀಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ಭಾನುಪ್ರಕಾಶ್, ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಇದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button