Breaking NewsLatestಚಿತ್ರದುರ್ಗಜಿಲ್ಲಾ ಸುದ್ದಿರಾಜ್ಯರಾಷ್ಟ್ರೀಯಸುದ್ದಿ
ಇಂದು ಮೊಳಕಾಲ್ಮುರಿನ ರಾಮಪುರದಿಂದ ಹೊರಟ ಭಾರತ್ ಜೋಡೋ ಪಾದಯಾತ್ರೆ

ಚಿತ್ರದುರ್ಗ : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಇಂದಿಗೆ 13 ನೇ ದಿನಕ್ಕೆ ಕಾಲಿಟ್ಟಿದೆ. ಭಾರತ್ ಜೋಡೋ ಪಾದಯಾತ್ರೆಯು ಇಂದು ಮೊಳಕಾಲ್ಮುರಿನ ರಾಮಪುರದಿಂದ ಹೊರಟಿದೆ. ಈ ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಮ, ಲಕ್ಷ್ಮಣ, ಹನುಮಂತ ಸೇರಿದಂತೆ ರಾಮಾಯಣ ಪಾತ್ರಧಾರಿಗಳ ಜತೆ ರಾಹುಲ್ ಗಾಂಧಿ ಅವರು ಹೆಜ್ಜೆ ಹಾಕಿದರು.
ಬಳ್ಳಾರಿಯ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಅ. 15ರಂದು ಶನಿವಾರ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯ ಸಮಾವೇಶಕ್ಕೆ ಸುಮಾರು 3-4 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.
ಸಂಸದ ಹಾಗೂ ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ 13ನೇ ದಿನದ ಪಾದಯಾತ್ರೆ ಶುಕ್ರವಾರ ಬೆಳಗ್ಗೆ ಆರಂಭವಾಯಿತು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದಿಂದ ಪಾದಯಾತ್ರೆ ಆರಂಭಗೊಂಡಿದ್ದು, ರಾಹುಲ್ ಗಾಂಧಿ ಹುಮ್ಮಸ್ಸಿನಲ್ಲಿ ಹೆಜ್ಜೆ ಹಾಕುವುದನ್ನು ಮುಂದುವರಿಸಿದ್ದಾರೆ
