Breaking NewsLatestರಾಷ್ಟ್ರೀಯಸುದ್ದಿ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಗೆ ಎಸ್ ಐಟಿ ನೋಟಿಸ್

ಹೈದರಾಬಾದ್‌: ಭಾರತ್ ರಾಷ್ಟ್ರ ಸಮಿತಿಯ ಶಾಸಕರ ಖರೀದಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಇದೇ ತಿಂಗಳು 21 ರಂದು ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಿದೆ. ಬಿಜೆಪಿಯು ಬಿಆರ್‌ಎಸ್‌ ಪಕ್ಷದ ಶಾಸಕರನ್ನು ಖರೀದಿಸಲು ಮುಂದಾದ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ತನಿಖೆ ನಡೆಸಲು ಕೆ.ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ಸರ್ಕಾರವು ಏಳು ಸದಸ್ಯರನ್ನೊಳಗೊಂಡ ವಿಶೇಷ ತಂಡ ರಚಿಸಿತ್ತು.

ಈ ತಂಡ ಸೆಕ್ಷನ್ 41 (ಎ) ಅಡಿಯಲ್ಲಿ ಬಿ ಎಲ್ ಸಂತೋಷ್ ಅವರಿಗೆ ನೋಟಿಸ್ ನೀಡಿದೆ. ಸಂತೋಷ್ ಅವರು ಹೇಳಿದ ದಿನಾಂಕ ಮತ್ತು ಸಮಯದಂದು ಎಸ್‌ಐಟಿ ಮುಂದೆ ಹಾಜರಾಗಲು ವಿಫಲವಾದರೆ ಅವರನ್ನು ಬಂಧಿಸಲಾಗುವುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button