Breaking NewsLatestಜಿಲ್ಲಾ ಸುದ್ದಿಬಾಗಲಕೋಟೆಮೆಟ್ರೋರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಸಂಪರ್ಕದಲ್ಲಿ ಬಿಜೆಪಿ, ಜೆಡಿಎಸ್ ಶಾಸಕರು: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ತಿರುಗೇಟು

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸಂಪರ್ಕದಲ್ಲಿರುವವರ ಹೆಸರನ್ನು ಈಗಲೇ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮ ಪಕ್ಷದ ಸಿದ್ಧಾಂತ ಮತ್ತು ನಾಯಕತ್ವದ ಮೇಲೆ ನಂಬಿಕೆ ಇರುವವರು ಪಕ್ಷಕ್ಕೆ ಬಂದರೆ ಸ್ವಾಗತವಿದೆ ಎಂದೂ ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು ತಮ್ಮ ಕ್ಷೇತ್ರಗಳಿಗೆ ಸೀಮಿತರಾಗಿದ್ದಾರೆ. ಉಸ್ತುವಾರಿ ಸಚಿವರ ಮಾತನ್ನೂ ಯಾರೂ ಕೇಳುತ್ತಿಲ್ಲ. ಉಸ್ತುವಾರಿ ಸಚಿವರು ಕಮೀಷನ್ ಗಾಗಿ ಹಾತೊರೆಯುತ್ತಿದ್ದಾರೆ. ಹೀಗಾಗಿ ಅವರ ಮಾತನ್ನು ಯಾರೂ ಕೇಳುವುದಿಲ್ಲ ಎಂದರು.

ನೆನೆಗುದಿಗೆ ಬಿದ್ದಿರುವ ಬಿಬಿಎಂಪಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸೇರಿದಂತೆ ವಿಧಾನಸಭೆ ಚುನಾವಣೆಗೂ ಕಾಂಗ್ರೆಸ್ ಪಕ್ಷ ಸಿದ್ದವಿದೆ ಎಂದು ಅವರು ಹೇಳಿದರು. ಬಾದಾಮಿಯಿಂದ ಸ್ಪರ್ಧಿಸುವಂತೆ ಬೆಂಬಲಿಗರ ಒತ್ತಾಯ ಕುರಿತು ಪ್ರತಿಕ್ರಿಯಿಸಿ, ಚುನಾವಣೆಗೆ ಇನ್ನೋ ಒಂದೂ ಕಾಲು ವರ್ಷವಿದೆ ನೋಡೋಣ. ಐದಾರು ಕಡೆ ಚುನಾವಣೆಗೆ ನಿಲ್ಲುವಂತೆ ನನ್ನ ಮೇಲೆ ಒತ್ತಡವಿದೆ ಎಂದರು.

ಈ ನಡುವೆ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದೆ.

Spread the love

Related Articles

Leave a Reply

Your email address will not be published. Required fields are marked *

Back to top button