Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾಧ್ಯಂತ BJP ಪ್ರತಿಭಟನೆ

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಇಂದು ಪ್ರತಿಭಟನೆಗೆ ಕರೆ ಕೊಟ್ಟಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಆರಂಭವಾಗುತ್ತಿದ್ದು, ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದೆ.

ಸತೀಶ್ ಜಾರಕಿಹೊಳಿ ವಿರುದ್ಧ ಜಿಲ್ಲಾ ಕೇಂದ್ರದ ಘಟಕಗಳಲ್ಲಿ ಪ್ರತಿಭಟನೆ ನಡೆಸುವಂತೆ ರಾಜ್ಯ ಬಿಜೆಪಿ ತನ್ನ ಸಚಿವರು, ಶಾಸಕರು, ಕಾರ್ಯಕರ್ತರಿಗೆ ಸೂಚನೆ ನೀಡಿದ್ದು, ಪ್ರತಿಭಟನೆಯಲ್ಲಿ ಜನಪ್ರತಿನಿಧಿಗಳು ಭಾಷಣ ಮಾಡಬೇಕು ಎಂದು ತಿಳಿಸಿದೆ.

ಭಾಷಣದಲ್ಲಿ ಗಂಧಿ ಕುಟುಂಬ ಹೊಂದಿರುವ ಗಾಂಧಿ ಕುಟುಂಬದ ಉಪನಾಮಪದ, ಸಿದ್ದರಾಮಯ್ಯ ಜಾರಿಗೆ ತಂದ ಟಿಪ್ಪು ಜಯಂತಿ, ಡಿ.ಕೆ.ಶಿವಕುಮಾರ್ ಯೇಸು ಪ್ರತಿಮೆ ಸ್ಥಾಪನೆ ವಿಷಯ ಪ್ರಸ್ತಾಪಿಸಬೇಕು ಎಂದು ಬಿಜೆಪಿ ತಿಳಿಸಿದೆ. ಪ್ರತಿಭಟನೆ ಬಳಿಕ ಜಿಲ್ಲಾ ಎಸ್ ಪಿ ಕಚೇರಿಗೆ ತೆರಳಿ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ಆರಂಭವಾಗಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button